ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ‘ವಿಶ್ವ ತಂಬಾಕು ದಿನಾಚರಣೆ’ಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕಾಲೇಜಿನ ಮನಶಾಸ್ತ್ರ ಉಪನ್ಯಾಸಕಿ, ಶ್ರೀಮತಿ ನಮಿತಾ ಕೆ ಆರ್ , ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತಾನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ದೂರವಿರಲು ವಹಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ, ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ವೃಂದಾ ನಿರೂಪಿಸಿ, ಪ್ರಾಪ್ತಿ ಸ್ವಾಗತಿಸಿ, ನಿರ್ಮಲಾ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.








