ಲಾಯಿಲ: ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಕಮ್ಮಿ ಇಲ್ಲ ಅನ್ನೋದನ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಶಾಲೆ ಸಾಬೀತುಪಡಿಸಿದೆ.

ಲಾಯಿಲದ ಕರ್ನೋಡಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನವೀಕರಣಗೊಂಡ ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ಇಂದು (ಜೂನ್. 22) ನೆರವೇರಿತು.

ಬದುಕು ಕಟ್ಟೋಣ ಬನ್ನಿ ಟ್ರಸ್ಟ್ನ ಸಂಚಾಲಕರು ಹಾಗೂ ಉಜಿರೆಯ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ಯ ಮಾಲಕರಾದ ಕೆ. ಮೋಹನ್ ಕುಮಾರ್ ಅವರು ಈ ನವೀಕೃತ ತರಗತಿಗಳನ್ನು ಅಧಿಕೃತವಾಗಿ ಉದ್ಘಾಟಿಸಿ, ಶಾಲೆಯ ಅಭಿವೃದ್ಧಿಗೆ ಶುಭ ಹಾರೈಸಿದರು. ಸರ್ಕಾರಿ ಶಾಲೆಯ ಮಕ್ಕಳಿಗೂ ಉತ್ತಮ ಸೌಲಭ್ಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ನವೀಕರಣ ಕಾರ್ಯ ಗಮನ ಸೆಳೆದಿದೆ.

ಈ ಸಮ್ಮುಖ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ SDMC ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲೆಯ ಈ ಹೊಸ ಹೆಜ್ಜೆಗೆ ಬೆಂಬಲ ಸೂಚಿಸಿದರು. ಗ್ರಾಮದ ಸರ್ಕಾರಿ ಶಾಲೆಯೊಂದು ಖಾಸಗಿ ಸ್ಕೂಲ್ಗಳ ಮಾದರಿಯಲ್ಲಿ ಕಂಗೊಳಿಸುತ್ತಿರುವುದಕ್ಕೆ ಸ್ಥಳೀಯರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.







