ಉಜಿರೆ: ಇಲ್ಲಿನ ಶ್ರೀ ಜನಾರ್ಧನ ದೇವಸ್ಥಾನದ ಬಳಿ ಇರುವ ಶ್ರೀ ಕೃಷ್ಣಾನುಗ್ರಹ ಕಲ್ಯಾಣ ಮಂಟಪದಲ್ಲಿ ಬೃಹತ್ ‘ಹಲಸು ಮತ್ತು ಹಣ್ಣು ಮೇಳ’ಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ.

ರೋಟರಿ ಕ್ಲಬ್ ಬೆಳ್ತಂಗಡಿ, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ ಉಜಿರೆ, ಗ್ರಾಮ ಪಂಚಾಯತ್ ಉಜಿರೆ ಹಾಗೂ ಬೆನಕ ಈವೆಂಟ್ಸ್ ಇವರ ಜಂಟಿ ಆಶ್ರಯದಲ್ಲಿ ಈ ವಿಶಿಷ್ಟ ಮೇಳವನ್ನು ಆಯೋಜಿಸಲಾಗಿದೆ.


ಕಾರ್ಯಕ್ರಮದ ಅಧಿಕೃತ ಉದ್ಘಾಟನೆಯನ್ನು ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ. ಡಾ. ಪ್ರಕಾಶ್ ಪ್ರಭು ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಡಾ. ಎಂ.ಎಂ. ದಯಾಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.







