ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಮುಖ್ಯ ಅತಿಥಿಯಾಗಿ ನಿಡ್ಲೆ ಹಾಗೂ ಉಜಿರೆ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಪ್ರತಿಮಾ ಉಪಸ್ಥಿತರಿದ್ದರು.


ಯೋಗ ತರಬೇತುದಾರರಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸ ಕಾಲೇಜಿನ ವಿದ್ಯಾರ್ಥಿಗಳಾದ ರಾಮಕೃಷ್ಣ ವಂದಿತ ಮತ್ತು ಭಾವನಾ ಯೋಗ ಪ್ರಾತ್ಯಕ್ಷಿಕೆಯನ್ನು ನೀಡಿದರು. ವಿದ್ಯಾರ್ಥಿಗಳು, ಶಿಕ್ಷಕರು ಯೋಗ ಪ್ರದರ್ಶನ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸಂಜೀವ. ಕೆ ಕಾರ್ಯಕ್ರಮ ಸಂಘಟಿಸಿದ್ದರು.








