ಬೆಳಾಲು: ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗಳ ಉದ್ಘಾಟನೆಯನ್ನು ಯಕ್ಷಗಾನ ಕಲಾವಿದ ಲಕ್ಷ್ಮಣ ಗೌಡ ಪುಳಿತ್ತಡಿ ಅವರು ನೆರವೇರಿಸಿದರು.

ಬಳಿಕ ಅವರು ಮಾತನಾಡಿ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ, ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ರವಿಚಂದ್ರ ಜೈನ್ ಕಾರ್ಯಕ್ರಮ ಸಂಘಟಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.





