ಧರ್ಮಸ್ಥಳ : ಸರಕಾರಿ ಉನ್ನತೀಕರಿಸಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2,ಶಾಲೆಯಲ್ಲಿ 12ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಆರೋಗ್ಯಕರ ವೃದ್ಧಿಗಾಗಿ ಯೋಗ ” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ .ನಂದ ಇವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ, ಶುಭವನ್ನು ಹಾರೈಸಿದರು.

ಹಾರ್ಟ್ ಫುಲ್ ನೆಸ್ ಧ್ಯಾನ ಕೇಂದ್ರ ಕನ್ಯಾಡಿ -2 ಇಲ್ಲಿಯ ತರಬೇತುದಾರರಾದ ಶ್ರೀಮತಿ ವತ್ಸಲ ಮತ್ತು ಶ್ರೀಮತಿ ಸಾವಿತ್ರಿ ಮೇಡಂ ರವರು ಶಾಲಾ ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಮತ್ತು ಯೋಗವನ್ನು ಹೇಳಿಕೊಡುವ ಮೂಲಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಎಸ್. ಡಿ .ಎಂ. ಸಿ . ಯ ಉಪಾಧ್ಯಕ್ಷೆ ಶ್ರೀಮತಿ ಹೇಮಲತಾ ಮತ್ತು ಸರ್ವ ಸದಸ್ಯರು,ಶಾಲಾ ಶಿಕ್ಷಕ ವೃಂದದವರು, ಶಾಲೆಯ ಮಕ್ಕಳು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.







