ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸುದೀರ್ಘ 35 ವರ್ಷಗಳ ಕಾಲ ಅಪಾರ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ರಾಜು ಶೆಟ್ಟಿ ಅವರಿಗೆ ಜೂನ್ 30 ರಂದು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಆತ್ಮೀಯ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಕಾರ್ಯವೈಖರಿಗೆ ಶ್ಲಾಘನೆ:
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಬ್ಬರ್ ಸೊಸೈಟಿಯ ಅಧ್ಯಕ್ಷ ಶ್ರೀಧರ ಜಿ. ಭಿಡೆ ಅವರು ಮಾತನಾಡಿ, ರಾಜು ಶೆಟ್ಟಿ ಅವರ ಸುದೀರ್ಘ 35 ವರ್ಷಗಳ ಸೇವಾ ಪಯಣ ಹಾಗೂ ಸಂಸ್ಥೆಯ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಮತ್ತು ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಕೊಂಡಾಡಿದರು.
ಈ ಸಂದರ್ಭದಲ್ಲಿ ರಬ್ಬರ್ ಸೊಸೈಟಿ, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಿಬ್ಬಂದಿ ವರ್ಗದ ಪರವಾಗಿ ರಾಜು ಶೆಟ್ಟಿ ದಂಪತಿಯನ್ನು ಗೌರವಪೂರ್ವಕವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು. ಹಿರಿಯ ವ್ಯವಸ್ಥಾಪಕಿ ಪದ್ಮಾವತಿ ಜೆ. ಶೆಟ್ಟಿ ಅವರು ಸನ್ಮಾನ ಪತ್ರ ವಾಚಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಕ್ಯಾಂಪೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಮಾಜಿ ಸಚಿವ ಕೆ. ಗಂಗಾಧರ ಗೌಡ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡ್ವೆಟ್ನಾಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಜು ಶೆಟ್ಟಿಯವರ ಸೇವೆಯನ್ನು ಸ್ಮರಿಸಿ ರಬ್ಬರ್ ಸೊಸೈಟಿಯ ಪರವಾಗಿ,ವಿವಿಧ ಸಂಘ-ಸಂಸ್ಥೆಗಳ ಹಾಗೂ ಸಿಬ್ಬಂದಿಗಳ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಿ, ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ,ನಿರ್ದೇಶಕರಾದ ಜಯಶ್ರೀ ಡಿ.ಎಂ., ಆರ್. ಸುಭಾಷಿಣಿ, ಬೈರಪ್ಪ, ರಾಮ ನಾಯ್ಕ, ಸೋಮನಾಥ ಬಂಗೇರ, ಗ್ರೇಸಿಯನ್ ವೇಗಸ್, ಪದ್ಮ ಗೌಡ ಎಚ್., ಕೆ.ಜೆ. ಅಗಸ್ಟೀನ್, ತಿಮ್ಮಪ್ಪ ಗೌಡ, ಭರತ್ ಕುಮಾರ್, ಶಾಜಿ ಪಿ.ಎ., ಶಶಿಧರ ಡೋಂಗ್ರೆ, ಬಾಲಕೃಷ್ಣ ಗೌಡ,ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್,ವ್ಯವಸ್ಥಾಪಕ ಪ್ರಕಾಶ್ ಗೌಡ ಸೇರಿದಂತೆ ಅನೇಕ ಗಣ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಬ್ಬರ್ ಸೊಸೈಟಿಯ ಹಿರಿಯ ವ್ಯವಸ್ಥಾಪಕಿ ಪದ್ಮಾವತಿ ಜೆ. ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ ಸ್ವಾಗತಿಸಿದರು. ಅಶ್ರಫ್ ಅಲಿ ಕುಂಞ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.





