ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ಜೂ.30ರಂದು ನಡೆಯಿತು.

ಮುಖ್ಯ ಅತಿಥಿ, ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾಂಚನ ಇಲ್ಲಿಯ ಮುಖ್ಯ ಶಿಕ್ಷಕರಾದ ಶ್ರೀ ಲಕ್ಷಣ ಗೌಡ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
“ವಿದ್ಯಾರ್ಥಿ ಸರಕಾರದಲ್ಲಿ ನಾಯಕನಾಗಿ ಚುನಾಯಿತನಾದ ವಿದ್ಯಾರ್ಥಿಯು ಶಾಲೆಯಲ್ಲಿ ಹಲವಾರು ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಮುಂದೊಂದು ದಿನ ದೇಶದ ಉತ್ತಮ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿದೆ. ಉತ್ತಮ ರೀತಿಯಲ್ಲಿ ಶಾಲೆಯನ್ನು ಮುನ್ನಡೆಸಿಕೊಂಡು ಹೋಗಿ” ಎಂದು ಶುಭ ಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜು ರಜಪೂತ್ ಅವರು ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದರು. ಶಿಕ್ಷಕಿ ಉಷಾ ಕುಮಾರಿ ಮಂತ್ರಿಗಳ ಜವಾಬ್ದಾರಿಯನ್ನು ತಿಳಿಸಿದರು. ವೇದಿಕೆಯಲ್ಲಿ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶೋಭಾ ಸ್ವಾಗತಿಸಿ, ಸುಮಾ ವಂದಿಸಿದರು. ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.







