ಪಂಜ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಂಜದ ಬೈಲ್ ನಿವಾಸಿ, 21 ವರ್ಷದ ತನುಷ್ ಗೌಡ ಎಂಬುವವರೇ ಮೃತಪಟ್ಟ ದುರ್ದೈವಿ ಯುವಕ. ತನುಷ್ ಗೌಡ ಅವರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.
ವಿಷ ಪದಾರ್ಥ ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.







