ಕೊಪ್ಪಳ, ಜುಲೈ 04: ಆರ್ಥಿಕ ಸಂಕಷ್ಟ ಹಾಗೂ ಸಾಲಬಾಧೆಯ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಗಂಗಾವತಿಯಲ್ಲಿ ಸಂಭವಿಸಿದೆ.

ಪತಿ ಪ್ರಕಾಶ್(54), ಪತ್ನಿ ಪ್ರಭಾ(46) ಮತ್ತು ಮಗ ಶಶಾಂಕ್(21) ಮೃತರು. ಸದ್ಯ ಸ್ಥಳಕ್ಕೆ ಗಂಗಾವತಿ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು?
ಪ್ರಕಾಶ್ ರಾಯ್ಕರ್ ಜ್ಯುವೆಲರಿ ಶಾಪ್ ನಡೆಸುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ ಸಾಲಬಾಧೆಯೇ ಈ ದುಡುಕಿನ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.





