ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಚ್ಆರ್ಡಿ ವಿಭಾಗ ಹಾಗೂ ಇಂಟರಾಕ್ಟ್ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ನ ನೂತನ ಅಧ್ಯಕ್ಷ ರೋ. ರಾಘವೇಂದ್ರ ಪಿದಮಲೆ, ರೋ. ಬಿ. ಸೋಮಶೇಖರ್ ಶೆಟ್ಟಿ ಹಾಗೂ ರೋ. ಯಶವಂತ್ ಪಟವರ್ಧನ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರೋ. ಬಿ. ಸೋಮಶೇಖರ್ ಶೆಟ್ಟಿ ಅವರು ‘ಸ್ವಾಸ್ಥ್ಯ ಸಂಕಲ್ಪ’ದ ಉದ್ದೇಶ, ವೈಯಕ್ತಿಕ ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಪೂರ್ಣ ಹಾಗೂ ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ, ಚೇತನ, ಕವನ, ಶ್ರೇಯಾಂಸ ಜೈನ್ ಹಾಗೂ ಮಂಜುನಾಥ್ ಅವರ ಸಹಕಾರದೊಂದಿಗೆ, ಶಾಲೆಯ ಶಿಕ್ಷಕ ವೃಂದದ ಸಕ್ರಿಯ ಸಹಯೋಗದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.







