ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಚ್ಆರ್ಡಿ ವಿಭಾಗ ಹಾಗೂ ಇಂಟರಾಕ್ಟ್ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ ಇಂಟರಾಕ್ಟ್ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ನ ನೂತನ ಅಧ್ಯಕ್ಷ ರೋ. ರಾಘವೇಂದ್ರ ಪಿದಮಲೆ, ರೋ. ಬಿ. ಸೋಮಶೇಖರ್ ಶೆಟ್ಟಿ ಹಾಗೂ ರೋ. ಯಶವಂತ್ ಪಟವರ್ಧನ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್. ವಹಿಸಿದ್ದರು.
ಸಮಾರಂಭದಲ್ಲಿ ರೋಟರಿ ಕ್ಲಬ್ನ ಅಧ್ಯಕ್ಷರಾದ ರೋ. ರಾಘವೇಂದ್ರ ಪಿದಮಲೆ ಅವರು ಇಂಟರಾಕ್ಟ್ ಕ್ಲಬ್ನ ಮಹತ್ವ, ನಾಯಕತ್ವದ ಗುಣಗಳು ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ದಿಷಾ ಪಿ. ಸುಹಾ ಪಾತೀಮಾ ರವರು ಅಧಿಕಾರ ಸ್ವೀಕರಿಸಿದರು. ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದ ಅವರು, ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಶಾಲೆ ಹಾಗೂ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವಂತೆ ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ, ಚೇತನ, ಕವನ, ಶ್ರೇಯಾಂಸ ಜೈನ್ ಹಾಗೂ ಮಂಜುನಾಥ್ ಅವರ ಸಹಕಾರದೊಂದಿಗೆ, ಶಾಲೆಯ ಶಿಕ್ಷಕ ವೃಂದದ ಸಕ್ರಿಯ ಸಹಯೋಗದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.







