ಬೆಳ್ತಂಗಡಿ: ನಿರಂತರವಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮತ್ತು ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ತಾಲೂಕಿನ ಸರ್ಕಾರಿ ಶಾಲೆಯ ಆಯ್ದ 350 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸಂಸ್ಥೆಯ 586ನೇ ಸೇವಾ ಯೋಜನೆಯಾಗಿ ಈ ಕಾರ್ಯಕ್ರಮ ಮೂಡಿಬರಲಿದೆ.
ಕಾರ್ಯಕ್ರಮದ ವಿವರಗಳು:
ದಿನಾಂಕ : 12.07.2026, ಭಾನುವಾರ
ಸ್ಥಳ: ಕುತ್ತ್ಯಾರು ಹೊಸಮನೆ ಶ್ರೀ ಸಹ ಪರಿವಾರ ನಾಗಬ್ರಹ್ಮಾದಿ ಕ್ಷೇತ್ರ, ರೆಂಕೆದಗುತ್ತು
ಗಣ್ಯರ ಉಪಸ್ಥಿತಿ:
ಈ ಬೃಹತ್ ಶೈಕ್ಷಣಿಕ ಸೇವಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಗದೀಶ್ ಲಾಯಿಲ ವಹಿಸಲಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಪತ್ ಬಿ. ಸುವರ್ಣ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳು:
ಕಾರ್ಯಕ್ರಮದಲ್ಲಿ ಪ್ರಮುಖ ಗಣ್ಯರಾದ ಕರ್ನಾಟಕ ಸರ್ಕಾರದ ವಿದ್ಯುತ್ ಮಂಡಳಿ ಅಧ್ಯಕ್ಷರಾದ ಹರೀಶ್ ಕುಮಾರ್, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಕಿಶೋರ್ ಗೌಡ, ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಾನಂದ ಗೌಡ, ಉಜಿರೆಯ ಹಳ್ಳಿಮನೆ ಮಾಲಕರಾದ ಪ್ರವೀಣ್ ಫರ್ನಾಂಡಿಸ್, ‘ರಂಗ್ ದ ರಾಜೆ’ ಖ್ಯಾತಿಯ ನಟ ಸುಂದರ್ ರೈ ಮಂದಾರ ಉಪಸ್ಥಿತರಿರಲಿದ್ದಾರೆ.
ಅಲ್ಲದೆ, ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ತುಕಾರಾಮ್ ಬಿ., ಬಳಂಜ ಶಿಕ್ಷಣ ಟ್ರಸ್ಟ್ನ ಮನೋಹರ್ ಬಳಂಜ, ಜಿಲ್ಲಾ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷರಾದ ಸಿದ್ದಿಕ್ ಕೆಂಪಿ ಉಪ್ಪಿನಂಗಡಿ, ರೆಂಕೆದಗುತ್ತು ಸಂಗಮ್ ಸ್ಟೋರ್ ಮಾಲಕರಾದ ಸಿರಿಲ್ ಡಿಸೋಜ, ದಿನೇಶ್ ಶೆಟ್ಟಿ ಹಾಗೂ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಶರತ್ ಕರಾಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
“ಕಳೆದ ಬಾರಿ ಬೆಳ್ತಂಗಡಿ ತಾಲೂಕಿನ 300 ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಗಿತ್ತು. ಈ ಬಾರಿ ನಮ್ಮ ಸೇವಾ ವ್ಯಾಪ್ತಿಯನ್ನು ವಿಸ್ತರಿಸಿ, ಒಟ್ಟು 350 ಅರ್ಹ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಬ್ಯಾಗ್ಗಳನ್ನು ವಿತರಿಸುತ್ತಿದ್ದೇವೆ.” ಎಂದು ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರು ತಿಳಿಸಿದ್ದಾರೆ.







