ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 9ನೇ ತರಗತಿಯ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮೃತ ವಿದ್ಯಾರ್ಥಿಯನ್ನು ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ ಪೂರ್ಣಚಂದ್ರ ಗೌಡ ಎಂಬವರ ಪುತ್ರ ಶಿಶಿಲ್ (15 ವರ್ಷ) ಎಂದು ಗುರುತಿಸಲಾಗಿದೆ. ಈತ ನಿಂತಿಕಲ್ಲು ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಕೆಲ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.







