ಪುತ್ತೂರು: ಇಲ್ಲಿನ ಕಲಿಮಾರ್ ಎಂಬಲ್ಲಿ ಜಿಮ್ ಟ್ರೈನರ್ ಆಗಿದ್ದ ಸಚಿನ್ ರೈ ಎಂಬುವವರು ನಿಗೂಢವಾಗಿ ಮೃತಪಟ್ಟ ಘಟನೆ ನಡೆದಿದೆ.

ಸದ್ಯ ಸಚಿನ್ ಅವರ ಸಾವಿನಲ್ಲಿ ಸಂಶಯವಿದೆಯೆಂದು ಅವರ ತಾಯಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೃತ ಸಚಿನ್ ರೈ ಅವರು ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನ ಕಲಿಮಾರ್ನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದರು. ಕಳೆದ ಹಲವು ವರ್ಷಗಳಿಂದ ಇವರು ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು.
ಜುಲೈ 5 ರಂದು ಬೆಳಗ್ಗೆ ಸಚಿನ್ ರೈ ಅವರು ಮನೆಯಲ್ಲಿ ದಿಢೀರನೆ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಸಚಿನ್ ರೈ ಅವರ ಹಠಾತ್ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಅವರ ತಾಯಿ ಗುಲಾಬಿ ಅವರು, ಮಗನ ಸಾವಿನಲ್ಲಿ ಸಂಶಯವಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.







