ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಾಣಿ ವಲಯದ ಮಾಣಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ ಉದ್ಘಾಟಿಸಿ,

ಗ್ರಾಮೀಣ ಪರಿಸರದಲ್ಲಿ ಜನರ ಅನುಕೂಲಕ್ಕಾಗಿ ಡಿಜಿಟಲ್ ಸೇವಾ ಕೇಂದ್ರ ಆರಂಭಿಸಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಮಾಡುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.
ಮಾಣಿ ವಲಯ ಮೇಲ್ವಿಚಾರಕಿ ಆಶಾಪಾರ್ವತಿ ಡಿ.ಜಿ.ಪೇ ಮಾಹಿತಿ ನೀಡಿದರು. ಸೇವಾ ಪ್ರತಿನಿಧಿ ಲಾಯ್ಲಾಬಿ ,vle ಸಂಗೀತ,ಸುವಿಧಾ ಸಹಾಯಕಿ,ಸಂಘದ ಸದಸ್ಯರು ಉಪಸ್ಥಿತರಿದ್ದರು.






