ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇವುಗಳ ಜಂಟಿ ಸಹಭಾಗಿತ್ವದಲ್ಲಿ ವಿಶೇಷ ಮದ್ಯವರ್ಜನ ಶಿಬಿರ ಯಶಸ್ವಿಯಾಗಿ ನಡೆಯುತ್ತಿದೆ.

ಪರಮಪೂಜ್ಯ ಧರ್ಮಾಧಿಕಾರಿ ಡಾ॥ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರವಾದ “ಜಾಗೃತಿಸೌಧ”ದಲ್ಲಿ 274ನೇ ವಿಶೇಷ ಮದ್ಯವರ್ಜನ ಶಿಬಿರ (ಹಾಗೂ 2081ನೇ ರಾಜ್ಯ ಮಟ್ಟದ ಶಿಬಿರ) ಆಯೋಜನೆಗೊಂಡಿದೆ.
ಜೀವನ ಪರಿವರ್ತನೆಗೆ ಅಮೂಲ್ಯ ಮಾರ್ಗದರ್ಶನ:
ಶಿಬಿರದ 5 ನೇ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜನ ಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ವಿವೇಕ್ ವಿನ್ಸೆಂಟ್ ಪಾಯಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.




