ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಪ್ರತಿಷ್ಠಿತ ಚುನಾವಣೆಯಲ್ಲಿ ಕುಂದಾಪುರದ ಹಿರಿಯ ನ್ಯಾಯವಾದಿ ಶ್ಯಾಮಲಾ ಭಂಡಾರಿ ಅವರು ಭರ್ಜರಿ ಜಯ ದಾಖಲಿಸಿದ್ದಾರೆ.

ಈ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಇತಿಹಾಸದಲ್ಲೇ ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಹಿರಿಯ ವಕೀಲರಾಗಿ ಸಾಮಾಜಿಕ ಹೋರಾಟಗಳ ಮೂಲಕ ಮಹಿಳಾ ರಾಜಕಾರಣದಲ್ಲಿ ವಿಶಿಷ್ಟ ವಾಗಿ ಸಾಮಾಜಿಕ ಶೈಕ್ಷಣಿಕ ಕಾನೂನು ಕ್ಷೇತ್ರಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆ ಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘ ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ






