ಶಿರ್ಲಾಲು: ಇಲ್ಲಿನ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು.

ಶಾಲೆಯ ಹಳೇ ವಿದ್ಯಾರ್ಥಿ, ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಶಿರ್ಲಾಲು ಬ್ರಹ್ಮ ಬೈದರ್ಕಳ ಗರಡಿಯ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ವಿಶ್ವನಾಥ ಸಾಲಿಯಾನ್ ಪುದ್ದರಬೈಲು ಅವರು ತಮ್ಮ ಸ್ವಂತ ಖರ್ಚಿನಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ಗಳನ್ನು ವಿತರಿಸಿ, ಮಾತೃಶಾಲೆಯ ಮೇಲಿನ ತಮ್ಮ ಅಭಿಮಾನವನ್ನು ಮೆರೆದರು.
ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಕರಿಯಪ್ಪ ಎ.ಕೆ., ಸಹಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.






