ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರತಿವರ್ಷ ಅತ್ಯಂತ ಶ್ರದ್ಧಾ-ಭಕ್ತಿಯಿಂದ ನಡೆಯುವ 55ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದೆ. ಜುಲೈ 16 ರಿಂದ ಸೆಪ್ಟೆಂಬರ್ 17 ರವರೆಗೆ ಈ ಆಧ್ಯಾತ್ಮಿಕ ಕಾರ್ಯಕ್ರಮ ವೈಭವದಿಂದ ಜರುಗಲಿದೆ.

ಸಮಯ ಮತ್ತು ಸ್ಥಳ: ಧರ್ಮಸ್ಥಳ ದೇವಸ್ಥಾನದ ಎದುರಿಗಿರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ 6:30 ರಿಂದ 8:00 ಗಂಟೆಯವರೆಗೆ ಪ್ರವಚನ ನಡೆಯಲಿದೆ.
ಪ್ರಮುಖ ಕಾವ್ಯ: ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ವಾಚನ-ಪ್ರವಚನ ನಡೆಯಲಿದೆ.
ವಾರಾಂತ್ಯದ ವಿಶೇಷ: ಪ್ರತಿಯೊಂದು ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ ಮತ್ತು ಪ್ರವಚನಕ್ಕೆ ಬಳಸಲಾಗುತ್ತದೆ.


ಉದ್ಘಾಟನಾ ಸಮಾರಂಭ: ಜುಲೈ 16 ರಂದು ಸಂಜೆ 5:00 ಗಂಟೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆ: ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮೊದಲ 2 ದಿನಗಳ ವಿಶೇಷ: ಜುಲೈ 16 (ಗುರುವಾರ) ಮತ್ತು ಜುಲೈ 17 (ಶುಕ್ರವಾರ) ರಂದು ಗಣಪತಿ ಭಟ್ ಪದ್ಯಾಣ ಅವರು ವಾಚನಕಾರರಾಗಿ ಹಾಗೂ ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಅವರು ಪ್ರವಚನಕಾರರಾಗಿ ಭಾಗವಹಿಸಲಿದ್ದಾರೆ.





