ಹೆಬ್ರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಹೆಬ್ರಿ ತಾಲೂಕು ಮಟ್ಟದ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ಜರುಗಿತು.


ಸಭೆ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ಶ್ರೀ ಗೋಪಾಲ್ ಕುಲಾಲ್ ರವರು ವಹಿಸಿದ್ದರು. ಸಭೆಯಲ್ಲಿ ಧರ್ಮಸ್ಥಳ ಭಜನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಬಸ್ರೂರವರು ಉಪಸ್ಥಿತರಿದ್ದು ಕ್ಷೇತ್ರದ ಕಾರ್ಯಕ್ರಮಗಳ ಬಗ್ಗೆ ಹಾಗೂ 28 ನೇ ವರ್ಷದ ಭಜನಾ ಕಮ್ಮಟದ ಪೂರ್ವ ತಯಾರಿ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ನೂತನ ಯೋಜನಾಧಿಕಾರಿಗಳಾದಂತ ಶ್ರೀಮತಿ ರೇಷ್ಮಾ ಅವರು ಪರಿಷತ್ತಿನ ಹಾಗೂ ಇದರ ಕಾರ್ಯ ಚಟುವಟಿಕೆಗಳ ಬಗ್ಗೆ ಪ್ರಸ್ತಾವಿಕ ಮಾತನಾಡಿದರು. 28ನೇ ವರ್ಷದ ಭಜನಾ ಕಮ್ಮಟಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳನ್ನು ಕಳುಹಿಸಿ ಕೊಡುವುದಾಗಿ ನಿರ್ಣಯಿಸಲಾಯಿತು.

ಸಂಗೀತ ಲೋಕದ ಸ್ವರ ಸಾಮ್ರಾಜ್ಞೆ ಎಸ್ ಜಾನಕಿ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆಯ ಮುಖಾಂತರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪರಿಷತ್ತಿನ ಉಪಾಧ್ಯಕ್ಷರದಂತಹ ಶ್ರೀ ಸುರೇಶ್ ವರಂಗ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಕೇಂದ್ರ ಸಮಿತಿಯ ಅಧ್ಯಕ್ಷರಾಗಿದ್ದಂತಹ ಪ್ರವೀಣ್ ಹೆಗ್ಡೆ ವಲಯ ಸಂಯೋಜಕರಾದಂತಹ ಶ್ರೀ ಸತೀಶ್ ಕುಮಾರ್, ಹಾಗೂ ತಾಲೂಕಿನ ಸುಮಾರು 15ಕ್ಕೂ ಹೆಚ್ಚಿನ ಭಜನಾ ಮಂಡಳಿಗಳ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಭಜನಾ ಪರಿಷತ್ತಿನ ಉಡುಪಿ ಜಿಲ್ಲಾ ಸಮನ್ವಯ ಅಧಿಕಾರಿ ರವೀಂದ್ರ ಎಸ್ ರವರು ಸ್ವಾಗತಿಸಿದರು. ಪ್ರವೀಣ್ ಕುಮಾರ್ ಬಿ ಎಮ್, (-ಸಿ ಎಸ್ ಸಿ ನೋಡೆಲ್ ಅಧಿಕಾರಿ )ಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಸೇವಾ ಪ್ರತಿನಿಧಿ ಶ್ರೀಮತಿ ಕಾಂತಿಯವರು ಧನ್ಯವಾದಗಳು ಸಮರ್ಪಿಸಿದರು.







