ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ಕರುಣಾಜನಕ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ.



ಪೆರಿಯಡ್ಕದ ಬೊಳ್ಳಾವಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೂಲಿ ಕಾರ್ಮಿಕ ಯೋಗೀಶ್ ಯಾನೆ ಸಂಕೇತ್ (25) ಎಂಬ ಯುವಕ ಜು.13ರ ರಾತ್ರಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ಎರಡು ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದ ಆತನಿಗೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಘಟನೆ ಸಂಬಂಧ ಕುಟುಂಬಸ್ಥರು ಆಸ್ಪತ್ರೆಗೆ ಕೊಂಡೊಯ್ದರಾದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಮೃತನು ಪೋಷಕರು ಹಾಗೂ ಸಹೋದರ-ಸಹೋದರಿಯನ್ನು ಅಗಲಿದ್ದಾನೆ.






