ಉಜಿರೆ: ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಸೇವನೆ ಹಾಗೂ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ “Stay Fit, Stay Smart” ಎಂಬ ಆರೋಗ್ಯ ಅರಿವು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ ಅವರು ವಹಿಸಿದ್ದರು. ತಮ್ಮ ಅಧ್ಯಕ್ಷೀಯ ನುಡಿಯಲ್ಲಿ, “ಆರೋಗ್ಯವೇ ಜೀವನದ ನಿಜವಾದ ಸಂಪತ್ತು. ಆರೋಗ್ಯವಂತ ವಿದ್ಯಾರ್ಥಿಗಳೇ ಉತ್ತಮ ಶಿಕ್ಷಣವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ.

ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ನಾರಾಯಣ ಗುರು ಸೇವಾ ಸಂಘದ ನಿರ್ದೇಶಕಿ ಹಾಗೂ ಪ್ರಸ್ತುತ Wellness Coach ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಸುಜಾತಾ ಅಣ್ಣಿ ಪೂಜಾರಿ ಅವರು ಭಾಗವಹಿಸಿ, ಆರೋಗ್ಯಕರ ಜೀವನಶೈಲಿಯ ಮಹತ್ವ, ಪೌಷ್ಟಿಕ ಆಹಾರದ ಅಗತ್ಯತೆ, ಉತ್ತಮ ದಿನಚರಿ, ದೈಹಿಕ ವ್ಯಾಯಾಮ, ಮಾನಸಿಕ ಆರೋಗ್ಯ ಹಾಗೂ ಆರೋಗ್ಯಕರ ಆಹಾರ ಪದ್ಧತಿಯ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಆರೋಗ್ಯವನ್ನು ಕಾಪಾಡಿಕೊಳ್ಳಲು ಅಳವಡಿಸಿಕೊಳ್ಳಬೇಕಾದ ಉತ್ತಮ ಅಭ್ಯಾಸಗಳ ಬಗ್ಗೆ ಅವರು ಪ್ರಾಯೋಗಿಕ ಸಲಹೆಗಳನ್ನು ನೀಡಿದರು.

ವೇದಿಕೆಯಲ್ಲಿ ಶ್ರೀಮತಿ ಚೈತನ್ಯ ಚಂದ್ರಶೇಖರ್ ಹಾಗೂ ಶ್ರೀ ಅಣ್ಣಿ ಪೂಜಾರಿ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ಆರೋಗ್ಯಕರ ಜೀವನದ ಕುರಿತು ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು.

ಕಾರ್ಯಕ್ರಮವನ್ನು ಶಾಲೆಯ ಸಹಶಿಕ್ಷಕರಾದ ಶ್ರೀ ಗಣೇಶ್ ಅವರು ಅಚ್ಚುಕಟ್ಟಾಗಿ ನಿರೂಪಿಸಿ, ಸ್ವಾಗತಿಸಿ, ಅಂತ್ಯದಲ್ಲಿ ಧನ್ಯವಾದ ಸಮರ್ಪಿಸಿದರು. ಶಾಲೆಯ ಸಹಶಿಕ್ಷಕ ವೃಂದದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.





