ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಭೇಟಿ ನೀಡಿ , ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.

ಯು.ಟಿ. ಖಾದರ್ ಅವರು ಧರ್ಮಸ್ಥಳಕ್ಕೆ ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.









