ಮೂಡುಬಿದ್ರೆ: ನೇಣುಬಿಗಿದುಕೊಂಡು ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ನಿನ್ನೆ(ಜು.17) ಸಂಜೆ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.


ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







