ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರಾದ ಶ್ರೀ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ ನೀಡಿದರು.

ಇಲ್ಲಿನ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಹಲವಾರು ಮಾಹಿತಿಗಳನ್ನು ನೀಡಿದರು. ಮಂದಿರದ ವಾರದ ಭಜನಾ ಸೇವೆ ನಡೆಸಲಾಯಿತು.



ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ತಾಲೂಕು ಕಾರ್ಯದರ್ಶಿ ಚಂದ್ರಶೇಖರ್,ವಲಯಾಧ್ಯಕ್ಷರಾದ ಗಣೇಶ್ ಕನ್ನಾಜೆ ಮತ್ತಿತರರು ಉಪಸ್ಥಿತರಿದ್ದರು. ವಾರದ ಭಜನಾ ಸೇವೆಯಲ್ಲಿ ಸುಮಾರು 30 ಮಂದಿ ಭಜಕ ಸದಸ್ಯರು ಉಪಸ್ಥಿತರಿದ್ದರು.







