ಬೆಳ್ತಂಗಡಿ: ಅಳದಂಗಡಿಯಲ್ಲಿ ಆಯೋಜಿಸಲಾದ ತುಳುನಾಡ ಸಿಂಗಾರ ಕಾರ್ಯಕ್ರಮದ ಅಂಗವಾಗಿ ನಡೆದ ಮೂರರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಯಶ್ವಿತ್ ಅಮೀನ್ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾನೆ.


ವಿದ್ಯಾರ್ಥಿಯ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನ ಹಾಗೂ ಚಿತ್ರಕಲಾ ಶಿಕ್ಷಕರಾದ ಶ್ರೀ ಜಯರಾಮ್ ಪಿ. ಎಸ್. ಅವರ ಸಮರ್ಪಕ ತರಬೇತಿ ಮತ್ತು ಪ್ರೋತ್ಸಾಹ ಪ್ರಮುಖ ಕಾರಣವಾಗಿದೆ.



ವಿದ್ಯಾರ್ಥಿಯ ಈ ಸಾಧನೆಗೆ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕರು ಹಾಗೂ ಸಹಪಾಠಿಗಳು ಅಭಿನಂದನೆಗಳನ್ನು ಸಲ್ಲಿಸಿ, ಶುಭ ಹಾರೈಸಿದ್ದಾರೆ.






