ಹಟ್ಟಿಯಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಹಟ್ಟಿಯಂಗಡಿ ವಲಯ ಸಭೆಯು ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರು ಹಾಗೂ ರಾಜ್ಯಭಜನಾ ಪರಿಷತ್ತಿನ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಬಸ್ರುರೂ ರವರು ವಹಿಸಿ ಕ್ಷೇತ್ರದ ಬಗ್ಗೆ ಹಾಗೂ 28ನೇ ವರ್ಷದ ಭಜನಾ ಕಮ್ಮಟದ ಪೂರ್ವ ತಯಾರಿ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.

ಪ್ರತಿ ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳನ್ನು ಸಿದ್ದಪಡಿಸುವದಾಗಿ ತಿಳಿಸಿದರು. ಯೋಜನೆಯ ಕಾರ್ಯಕ್ಷೇತ್ರಕ್ಕೆ ಅನುಗುಣವಾಗಿ ಹಟ್ಟಿಯಂಗಡಿ ವಲಯದ ಭಜನಾ ಮಂಡಳಿಗಳನ್ನು ತಲ್ಲೂರು ವಲಯಕ್ಕೆ ವಿಲೀನಗೊಳಿಸುವುದಾಗಿ ತೀರ್ಮಾನಿಸಲಾಯಿತು.


ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್ ಬಾಸ್ ಕಾರ್ಯಕ್ರಮವನ್ನು ನಿರ್ವಹಿಸಿದರು, ವಲಯ ಸಂಯೋಜಕಿ ಶ್ರೀಮತಿ ಜಯಲಕ್ಷ್ಮಿ, ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಶೆಟ್ಟಿ ವಲಯದ ಎಲ್ಲ ಭಜನ ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸದಸ್ಯರು ಉಪಸ್ಥಿತರಿದ್ದರು.






