ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇದರ ರಾಜ್ಯ ಸಮಿತಿ ಸಭೆಯು ಶ್ರೀ ಕ್ಷೇತ್ರದ ಅನ್ನಪೂರ್ಣ ಅನ್ನಛತ್ರದಲ್ಲಿ ನಡೆಯಿತು.

ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಕಾರ್ಯಕ್ರಮದ ಪೂರ್ವತಯಾರಿಯ ಬಗ್ಗೆ ಮಾರ್ಗದರ್ಶನ ಮಾಡಿದರು.

ಭಜನಾ ಪರಿಷತ್ ಕಾರ್ಯದರ್ಶಿಗಳಾದ ಎ ವೀರು ಶೆಟ್ಟಿಯವರು, ಸಂಚಾಲಕರಾದ ಜಿ ಸುಬ್ರಹ್ಮಣ್ಯ ಪ್ರಸಾದ್, ಮಹಾವೀರ ಅಜ್ರಿ, ರಾಜ್ಯ ಪರಿಷತ್ ಅಧ್ಯಕ್ಷರಾದ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಮತ್ತಿತರ ಅತಿಥಿಗಳು, ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್ ಬಸ್ರೂರು ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.







