ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆದ್ದು ಹಾಸ್ಟೆಲ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.


ಎಂದಿನಂತೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ದ ವೇಳೆ, ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಪ್ರತ್ಯಕ್ಷಗೊಂಡಿದೆ. ಕಾಳಿಂಗ ಸರ್ಪವನ್ನು ಕಂಡು ಹಾಸ್ಟೆಲ್ನಲ್ಲಿದ್ದವರು ಕ್ಷಣಕಾಲ ಬೆಚ್ಚಿಬಿದ್ದಿದ್ದಾರೆ.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಹಾಸ್ಟೆಲ್ ಸಿಬ್ಬಂದಿ ತಕ್ಷಣವೇ ಪ್ರಸಿದ್ಧ ಉರಗ ರಕ್ಷಕ ‘ಸ್ನೇಕ್ ಅಶೋಕ್ ಬೆಳ್ತಂಗಡಿ’ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಲುಪಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ನೇಕ್ ಅಶೋಕ್, ಅತ್ಯಂತ ಸಮಯಪ್ರಜ್ಞೆ ಮತ್ತು ಸಮಯೋಚಿತ ನಿಪುಣತೆಯಿಂದ ಕಾರ್ಯಾಚರಣೆ ನಡೆಸಿ, ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ.


ಯಾವುದೇ ಹಾನಿಯಾಗದಂತೆ ರಕ್ಷಿಸಲ್ಪಟ್ಟ ಈ ಬೃಹತ್ ಕಾಳಿಂಗ ಸರ್ಪವನ್ನು ನಂತರ ಕಾಡಿನ ನಿರ್ಜನ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ. ಸ್ನೇಕ್ ಅಶೋಕ್ ಅವರ ಕಾರ್ಯಾಚರಣೆಯಿಂದಾಗಿ ಹಾಸ್ಟೆಲ್ನಲ್ಲಿದ್ದ ದೊಡ್ಡದೊಂದು ಅಪಾಯ ತಪ್ಪಿದಂತಾಗಿದ್ದು, ಸಿಬ್ಬಂದಿ ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.







