ಬೆಳ್ತಂಗಡಿ: ವೇಣೂರಿನ ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೇಜಸ್ ಎಸ್ ಎಚ್ 9ನೇ ತರಗತಿ ಯ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.


ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ನೇತೃತ್ವದಲ್ಲಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರವೀಣ್ ಎನ್. ಅವರ ಮಾರ್ಗದರ್ಶನ ಹಾಗೂ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ, ಪೋಷಕರು ಹಾಗೂ ಸಹಪಾಠಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಇನ್ನಷ್ಟು ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.








