ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಶಾಖೆ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಆಶಾ ರಾಘವೇಂದ್ರ ಪಿದಾಮಲೆ ಅವರು ಪೂರ್ವಪ್ರಾಥಮಿಕ ಹಾಗೂ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಹಲ್ಲುಗಳ ಆರೈಕೆ, ಸರಿಯಾದ ರೀತಿಯಲ್ಲಿ ಹಲ್ಲುಗಳನ್ನು ಸ್ವಚ್ಛಗೊಳಿಸುವ ವಿಧಾನ ಹಾಗೂ ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವ ಮಹತ್ವದ ಕುರಿತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡಿದರು. ಹಲ್ಲುಗಳ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಜೆಸಿಂತಾ ಉಪಸ್ಥಿತರಿದ್ದರು.


ಶಿಕ್ಷಕಿ ಜೆಸಿಂತಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಮೋಹಿನಿ ಅವರು ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಕಿಯರಾದ ರಮ್ಯಾ ಬಿ. ಎಸ್., ಗೀತಾ ಪಿ., ಸೌಮ್ಯಾ ಪಿ., ಜಯಲಕ್ಷ್ಮಿ, ಜೆಸಿಂತಾ, ಪುಷ್ಪಾ, ಸಹನಾ, ಪ್ರಮೀಳ ಎನ್., ಪ್ರಮೀಳಾ ಪೂಜಾರಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.






