ಉಜಿರೆ: ಉಜಿರೆಯ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ, ದೇಶಭಕ್ತಿ ಮತ್ತು ಶೌರ್ಯವನ್ನು ಸ್ಮರಿಸಲಾಯಿತು.


ಶಾಲೆಯ ಪ್ರಾಂಶುಪಾಲರಾದ ಶ್ರೀ ಮನಮೋಹನ್ ನಾಯ್ಕ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, “ಇಂದಿನ ಯುವಜನತೆ ಕಾರ್ಗಿಲ್ ವಿಜಯ ದಿವಸದ ಮಹತ್ವವನ್ನು ಅರಿತುಕೊಂಡು ದೇಶಪ್ರೇಮ, ಕರ್ತವ್ಯನಿಷ್ಠೆ ಹಾಗೂ ರಾಷ್ಟ್ರೀಯ ಏಕತೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು”ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಮೂಡಿಸುವ ಏಕಪಾತ್ರಾಭಿನಯ, ದೇಶಭಕ್ತಿ ಗೀತೆ, ಕಾರ್ಗಿಲ್ ಯುದ್ಧದ ಮಾದರಿ ಪ್ರದರ್ಶನ ಹಾಗೂ ಸ್ಪಾಟ್ ಕ್ವಿಜ್ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.


ಕಾರ್ಯಕ್ರಮವನ್ನು ವಿದ್ಯಾರ್ಥಿನಿ ವೈಷ್ಣವಿ ಅವರು ನಿರೂಪಿಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಗಿಲ್ ವಿಜಯ ದಿವಸವನ್ನು ಗೌರವಪೂರ್ವಕವಾಗಿ ಆಚರಿಸಿದರು.





