ಉಜಿರೆ: ಜು. 31 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ” ಘಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಮನಮೋಹನ್ ನಾಯಕ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಬನ್ನಿಸ್ ಎಪ್ರೋನ್ ಧರಿಸುವ ಮೂಲಕ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಲ್ಯದಲ್ಲಿಯೇ ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವದ ಗುಣಗಳು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಬನ್ನಿಸ್ ಚಟುವಟಿಕೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.



ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಉನ್ನತ ತರಬೇತುದಾರರಾದ ಗೈಡ್ ಕ್ಯಾಪ್ಟನ್ ಶಮೀಮ್ ಬಾನು ಹಾಗೂ ಕಬ್ ಕ್ಯಾಪ್ಟನ್ ಮಮತ ಅವರ ನೇತೃತ್ವದಲ್ಲಿ ಮಕ್ಕಳಿಗೆ ವಿವಿಧ ಬನ್ನಿಸ್ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಪ್ರಿ-ಕೆ.ಜಿ. ಹಾಗೂ ಎಲ್.ಕೆ.ಜಿ. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಹಕಾರ ನೀಡಿದರು.






