ಬೆಳ್ತಂಗಡಿ: ವೈದ್ಯಕೀಯ ಕ್ಷೇತ್ರಕ್ಕೆ ಅತ್ಯಂತ ಹೆಮ್ಮೆಯ ಕ್ಷಣ! ತಮ್ಮ ಅತ್ಯುತ್ತಮ ವೈದ್ಯಕೀಯ ಸೇವೆ ಹಾಗೂ ಕೊಡುಗೆಗಾಗಿ ಪ್ರಖ್ಯಾತ ಡಾ. ಎಂ.ಎಮ್. ದಯಾಕರ್ ಅವರಿಗೆ ಪ್ರತಿಷ್ಠಿತ ‘ಹೆಲ್ತ್ಕೇರ್ ಎಕ್ಸಲೆನ್ಸ್ ಅವಾರ್ಡ್’ ಲಭಿಸಿದೆ.



ದಂತ ವೈದ್ಯಕೀಯ ಕ್ಷೇತ್ರ ಮತ್ತು ಆರೋಗ್ಯ ಸೇವೆಯಲ್ಲಿ ಡಾ. ದಯಾಕರ್ ಅವರ ನಿರಂತರ ಶ್ರಮ ಹಾಗೂ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಗಣ್ಯರ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.








