ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಭೂಕುಸಿತ ಭೀತಿ ಎದುರಾಗಿರುವ ಪ್ರದೇಶಗಳಿಗೆ ಇಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರ ಸಂಕಷ್ಟ ಆಲಿಸಿದ ಸಚಿವರು, ಬಳಿಕ ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ತಕ್ಷಣ ಪರಿಹಾರ ತಲುಪಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಸಭೆಯ ಆರಂಭದಲ್ಲಿ ಮಳೆಯ ಪ್ರಮಾಣ ಮತ್ತು ಹಾನಿಯ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಜೂನ್ನಿಂದ ಆಗಸ್ಟ್ವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 31 ರಷ್ಟು ಮಳೆ ಕೊರತೆಯಾಗಿದೆ. ಜುಲೈ ತಿಂಗಳಿನಲ್ಲೂ ಶೇ. 26 ರಷ್ಟು ಮಳೆ ಕೊರತೆ ದಾಖಲಾಗಿದ್ದು, ಕುಡಿಯುವ ನೀರಿಗೆ ಸದ್ಯಕ್ಕೆ ಯಾವುದೇ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದರು.
ಮಳೆ ಕೊರತೆ: ಜೂನ್–ಆಗಸ್ಟ್ ಅವಧಿಯಲ್ಲಿ ಶೇ. 31 ಹಾಗೂ ಜುಲೈನಲ್ಲಿ ಶೇ. 26 ರಷ್ಟು ಕೊರತೆ.
ಮನೆ ಹಾನಿ: ಜಿಲ್ಲೆಯಲ್ಲಿ ಯಾವುದೇ ಮನೆ ಸಂಪೂರ್ಣ ಹಾನಿಯಾಗಿಲ್ಲ. ಆದರೆ 57 ಮನೆಗಳು ಭಾಗಶಃ ಹಾನಿಗೊಂಡಿವೆ.

ಸಭೆಯಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ಗೈರುಹಾಜರಿ ಹಾಗೂ ಸ್ಪಷ್ಟ ಮಾಹಿತಿಯ ಕೊರತೆಯ ಬಗ್ಗೆ ಉಸ್ತುವಾರಿ ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರಿಗೆ ಮಳೆಯಿಂದಾಗಿ ಕೊಳೆರೋಗ ಹಾಗೂ ಹಳದಿ ರೋಗದ ಭೀತಿ ಎದುರಾಗಿದ್ದು, ರೈತರಿಗೆ ಸರಿಯಾದ ಮಾಹಿತಿ ನೀಡದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಿಡಿಕಾರಿದರು.
ಸಭೆಯಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳ ಗೈರುಹಾಜರಿ ಹಾಗೂ ಸ್ಪಷ್ಟ ಮಾಹಿತಿಯ ಕೊರತೆಯ ಬಗ್ಗೆ ಉಸ್ತುವಾರಿ ಸಚಿವರು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರಿಗೆ ಮಳೆಯಿಂದಾಗಿ ಕೊಳೆರೋಗ ಹಾಗೂ ಹಳದಿ ರೋಗದ ಭೀತಿ ಎದುರಾಗಿದ್ದು, ರೈತರಿಗೆ ಸರಿಯಾದ ಮಾಹಿತಿ ನೀಡದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಿಡಿಕಾರಿದರು.

ಅಧಿಕಾರಿಗಳು ತಮ್ಮ ಬೆರಳ ತುದಿಯಲ್ಲಿ ನಿಖರ ಮಾಹಿತಿ ಇಟ್ಟುಕೊಳ್ಳಬೇಕು ಹಾಗೂ ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಸಂತ್ರಸ್ತರಿಗೆ ಪರಿಹಾರ ತಲುಪಿಸಬೇಕು ಎಂದು ಸಚಿವರು ಅಂತಿಮ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರಡ್ಡಿ, ಡಿವೈಎಸ್ಪಿ ರೋಹಿಣಿ, ತಹಶೀಲ್ದಾರ್ ಎಸ್.ಎನ್.ನರಗುಂದ, ತಾ.ಪಂ ಇಒ ಭವಾನಿಶಂಕರ್, ಕಂದಾಯ ನಿರೀಕ್ಷಕ ರಾಜು ಲಮಾಣಿ, ಲಾಯಿಲ ಪಿಡಿಒ ತಾರಾನಾಥ್ ನಾಯ್, ಲಾಯಿಲ ಗ್ರಾ.ಆ.ಅಧಿಕಾರಿ ರನಿತಾ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಇಂಜಿನಿಯರ್ ಸಂದೀಪ್, ಪಿ.ಆರ್.ಡಿ.ಇ. ಎಇಇ ಜನಾರ್ಧನ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.






