ಉಡುಪಿ: ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, 27 ವರ್ಷದ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಕೃತಿ ಬಂಗೇರ ಎಂದು ಗುರುತಿಸಲಾಗಿದೆ. ಹೊಟೇಲ್ ಉದ್ಯೋಗಿಯಾಗಿದ್ದ ಕೃತಿ, ಮಾಡೆಲಿಂಗ್ ಕ್ಷೇತ್ರದಲ್ಲೂ ತೀವ್ರ ಆಸಕ್ತಿ ಹೊಂದಿದ್ದರು.

ತಮ್ಮ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯ ಮನೆಯಲ್ಲಿ ವಾಸವಾಗಿದ್ದ ಇವರು, ಬುಧವಾರ ತಮ್ಮ ಕೊಠಡಿಯಲ್ಲಿ ಚೂಡಿದಾರ್ ಶಾಲಿನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

ಕೃತಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದರು, ಹಾಗೂ ಮಾನಸಿಕವಾಗಿ ಕುಗ್ಗಿದಂತೆ ವರ್ತಿಸುತ್ತಿದ್ದರೆಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೃತಳ ಸಹೋದರಿ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.






