ಉಜಿರೆ: ಉಜಿರೆ – ಧರ್ಮಸ್ಥಳ ಮಾರ್ಗದ ನೀರಚಿಲುಮೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.

ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೃತ ಯುವಕನನ್ನು ಮಡಂತ್ಯಾರ್ ನಿವಾಸಿ ಸನತ್ ಯಾನೆ ಸೋಮನಾಥ್ (26) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಸನತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಬೈಕ್ನಲ್ಲಿದ್ದ ಮತ್ತೋರ್ವ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.






