ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್ನ ಬೆಳ್ತಂಗಡಿ ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.



ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಶ್ರೀ ದಿನೇಶ್ ಗೌಡ ಕೆ. ಕಲಾಯಿತೊಟ್ಟು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸಿದರು.
ದೇಶದ ಗಡಿಗಳನ್ನು ಕಾಯುವ ಯೋಧರ ಸೇವೆ ಹಾಗೂ ತ್ಯಾಗವನ್ನು ಪ್ರತಿಯೊಬ್ಬ ನಾಗರಿಕರೂ ಗೌರವಿಸಬೇಕು ಎಂದು ತಿಳಿಸಿದರು. ಸ್ವಾತಂತ್ರ್ಯದ ಮೌಲ್ಯವನ್ನು ಅರಿತು, ದೇಶದ ಅಭಿವೃದ್ಧಿ ಹಾಗೂ ಪ್ರಗತಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಅವರು ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.


ಕಾರ್ಯಕ್ರಮದಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಶ್ರೀ ಸಂತೋಷ್ ಕೋಟ್ಯಾನ್ ಬಳಂಜ, ಶೋರೂಮ್ ಮ್ಯಾನೇಜರ್ ಲೋಹಿತ್ ಕುಮಾರ್, ಸೂಜಾ ಎಲೆಕ್ಟ್ರಾನಿಕ್ಸ್ ಮಾಲೀಕರಾದ ಶ್ರೀ ಅಲ್ಫೋನ್ಸ್ ಫ್ರಾಂಕೋ, ಅಮರ್ ಡ್ರಗ್ ಹೌಸ್ ಮಾಲೀಕರಾದ ಗಣಪತಿ ಭಟ್ ,ಸುದ್ದಿ ಉದಯ ಪತ್ರಿಕೆಯ ಸಿಬ್ಬಂದಿ ವರ್ಗ ಮತ್ತು ಮುಳಿಯ ಗೋಲ್ಡ್ & ಡೈಮಂಡ್ಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಭಕ್ತಿ ಹಾಗೂ ದೇಶಪ್ರೇಮದ ಸಂದೇಶವನ್ನು ಸಾರುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಳಿಕ ಉಪಸ್ಥಿತರಿದ್ದವರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.





