ಪುತ್ತೂರು: ಕೆಯೂರು ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಯುವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರ ಬೊಳಿಕ್ಕಳ ನೆಲ್ಲಿಗುರಿ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ.
ಮೃತರನ್ನು ಅಭಿಲಾಷ್ ಎಂದು ಗುರುತಿಸಲಾಗಿದೆ. ಮಾಡಾವು ಕೊಯಿಲ ಕಡೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಬೈಕ್ ನಡುವೆ ಈ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿದ್ದಾರೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.




