ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಗೀತ ಗಾಯನ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಗೈಡ್ಸ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ಹಾಗೂ ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಗೀತ ಗಾಯನ ಸ್ಪರ್ಧೆಗಾಗಿ ಗೈಡ್ ಕ್ಯಾಪ್ಟನ್ ಶ್ರೀಮತಿ ರಮ್ಯಾ ಬಿ.ಎಸ್. ಅವರು ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದರು.

ವಿದ್ಯಾರ್ಥಿಗಳ ಈ ಯಶಸ್ಸು ಶಾಲೆಗೆ ಹೆಮ್ಮೆ ತಂದಿದ್ದು, ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಲಾಗಿದೆ.





