ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಉಪ ನಿರ್ದೇಶಕರ ಕಚೇರಿ ಮಂಗಳೂರು,


ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇದರ ಸಹಯೋಗದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಶ್ಯ ಪಂಚಮ ಸ್ಥಾನ,

ಭೂಮಿಕಾ ಎಸ್ ತೃತೀಯ ಸ್ಥಾನ ಮತ್ತು 14 ವರ್ಷದೊಳಗಿನ ಬಾಲಕಿರ ವಿಭಾಗದಲ್ಲಿ ಅಭಿಜ್ಞ ಚತುರ್ಥ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಶಾಲಾ ಮುಖ್ಯೋಪಾಧ್ಯಾಯನಿ ಹೇಮಲತಾ ಎಂ ಆರ್ ರವರು ಸಹಕಾರದಿಂದ ಶಾಲಾ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಮಾರ್ಗದರ್ಶನ ನೀಡಿರುತ್ತಾರೆ.






