ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯಲ್ಲಿ ಜರಗಿತ್ತು.

14 ವರ್ಷದೊಳಗಿನ ಬಾಲಕಿಯರ ರಿದವಿಕ್ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಭೂಮಿಕ ಎನ್ ಮತ್ತು ವರ್ಷಿಣಿ ಆರ್. ಎಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

17 ವರ್ಷದೊಳಗಿನ ಬಾಲಕರ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವಿನೀತ್ ಮತ್ತು ಸಮನ್ಯು ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಹಕಾರದೊಂದಿಗೆ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ಮಾರ್ಗದರ್ಶನ ನೀಡಿರುತ್ತಾರೆ.







