ಧರ್ಮಸ್ಥಳ : ಧರ್ಮಸ್ಥಳ – ಉಜಿರೆ ಹೆದ್ದಾರಿಯಲ್ಲಿ ಮಣ್ಣ ಸಂಕದ ಸಮೀಪ ಕೆ.ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಆ.28 ರಂದು ಶುಕ್ರವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು
ಕಾರು ಚಾಲಕ ಧರ್ಮಸ್ಥಳದ ನಿವಾಸಿ ಅನಂತರಾಮ್(54) ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಕಾರಿನ ಹಿಂದಿನಿಂದ ಬರುತ್ತಿದ್ದ ಓಮ್ನಿ ಕಾರು ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾದ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಗಾಯಗೊಂಡ ಅನಂತರಾಮ್ ಅವರನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




