ಪುಂಜಾಲಕಟ್ಟೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ಕುಕ್ಕಳ ನಿವಾಸಿ, 25 ವರ್ಷದ ಸುನಿಲ್ ಮೃತಪಟ್ಟ ದುರ್ದೈವಿ.
ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ತಲೆಯ ಭಾಗಕ್ಕೆ ಹಾಗೂ ಎದೆಗೆ ತೀವ್ರ ಏಟಾಗಿದ್ದ ಪರಿಣಾಮ 8 ದಿನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.





