ಬೆಳ್ತಂಗಡಿ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ರೀಡಾಪಟು ಮತ್ತು ಬೆಳ್ತಂಗಡಿಯ ಖ್ಯಾತ ವಕೀಲರಾದ ಶ್ರೀ ಕಮಲಾಕ್ಷ ರವರು ಭಾಗವಹಿಸಿ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವ ಮತ್ತು ಕ್ರೀಡಾಪಟುಗಳು ಅಳವಡಿಸಿಕೊಳ್ಳಬೇಕಾದ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಹೇಮಲತಾ ಎಂ ಆರ್ ರವರು ವಹಿಸಿದ್ದರು. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಪ್ರವೀಣ್ ಎನ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ಶ್ರೇಯಾಂಸ ಜೈನ್ ನಿರೂಪಿಸಿದರು.




