ಪುಂಜಾಲಕಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕು ಇದರ ಪುಂಜಾಲಕಟ್ಟೆ ವಲಯದ ಕಜೆಕಾರು ಮಾಡ ಪಲ್ಕೆ ಹಾಗೂ ಕರ್ಲ ತೆಂಕ ಕಜೆಕಾರು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಆಗಸ್ಟ್ 28ನೇ ಶುಕ್ರವಾರ ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನ ಕಜೆಕಾರು ಇಲ್ಲಿ ಜರಗಿತು.


ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಕಾರ್ಯಕ್ರಮ ನಡೆಸಲಾಯಿತು. ನಂತರ ನಡೆದ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮುಕ್ತೆಸರರಾದ ಕೆ ಯಶೋಧರ ಪೂಜಾರಿ ವಹಿಸಿದ್ದರು.


ಕಾರ್ಯಕ್ರಮವನ್ನು ಉದ್ಘಾಟನೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಗುಣಶೇಖರ್ ಕೊಡಂಗೆ ಮಾಡಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಿಕವರಿ ಯೋಜನಾಧಿಕಾರಿ ಸುನೀತಾ , ತಾಲೂಕು ಯೋಜನಾಧಿಕಾರಿ ಜಯಾನಂದ್ ಪಿ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ ,ಡಿಕಯ್ಯ ಬಂಗೇರ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು , ಯಶವಂತ ಕೊದ್ಯೆಲ್ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರು , ಮಹೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷೆ ಸುನೀತಾ,ಶ್ರೀ ಮಹಾದೇವದೇವೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಕುಲಾಲ್,ದೇವಸ್ಥಾನ ಸಮಿತಿ ಉಪಾಧ್ಯಕ್ಷ ಪ್ರವೀಣ್ ಅಬುರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 2 ಒಕ್ಕೂಟಗಳ ನಿಕಟ ಪೂರ್ವ ಪದಾಧಿಕಾರಿಗಳು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಿದರು. ಯೋಜನೆಯ ಮೂಲಕ ಅಭಿವೃದ್ಧಿ ಹೊಂದಿದ ಸೋಮಶೇಖರ್ ಕೊಡಂಗೆ, ಲಕ್ಷ್ಮಣ ಮೂಲ್ಯ ದೇವೋಟ್ಟು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವಲಯ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿ, ಸೇವಾಪ್ರತಿನಿಧಿ ಸುಧಾ ರೈ ವಂದಿಸಿದರು.ಪ್ರಕಾಶ್ ಕರ್ಲ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಉಷಾ, ಭವ್ಯ, ಕುಸುಮ ಸಹಕರಿಸಿದರು.





