ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತ ಯುವಕನನ್ನು ಉಜಿರೆ ನಿವಾಸಿ, 24 ವರ್ಷದ ರಿನ್ಸ್ ಶಿಬಿ ಎಂದು ಗುರುತಿಸಲಾಗಿದೆ.
ಮಂಗಳವಾರ ಸಂಜೆಯ ವೇಳೆ ರಿನ್ಸ್ ಶಿಬಿ ಅವರು ಸಂಚರಿಸುತ್ತಿದ್ದ ಬೈಕ್, ಪಣಕಜೆ ಮಸೀದಿ ಬಳಿ ಟೆಂಪೋದ ಹಿಂಬದಿಗೆ ರಭಸವಾಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರಿನ್ಸ್ ಅವರಿಗೆ ತಲೆ ಹಾಗೂ ದೇಹದ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು.

ಕೂಡಲೇ ಸ್ಥಳೀಯರು ಮತ್ತು ಹಿತೈಷಿಗಳು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.


ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






