ಬಂಟ್ವಾಳ : ಯೋಗ ಎನ್ನುವುದು ಕೇವಲ ಶಾರೀರಿಕ ವ್ಯಾಯಾಮವಲ್ಲ ಅದು ನಮ್ಮ ದೇಹ, ಮನಸ್ಸು ಮತ್ತು ಆತ್ಮವನ್ನು ಜೋಡಿಸುವ ಕ್ರಿಯೆಯಾಗಿದೆ.
ಇಂದು ಜಗತ್ತಿನಾದ್ಯಂತ ಜೂನ್ 21 ರಂದು ‘ಅಂತರರಾಷ್ಟ್ರೀಯ ಯೋಗ ದಿನ’ವನ್ನಾಗಿ ಆಚರಿಸುವ ಮೂಲಕ ಯೋಗದ ಶಕ್ತಿಯನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ.
ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಓದಿನ ಒತ್ತಡ ಹೆಚ್ಚಾಗಿದೆ. ಇಂತಹ ಸಮಯದಲ್ಲಿ ಪ್ರತಿದಿನ ಬೆಳಿಗ್ಗೆ ಕೇವಲ 15 ರಿಂದ 20 ನಿಮಿಷ ಯೋಗಾಸನ ಮತ್ತು ಪ್ರಾಣಾಯಾಮ ಮಾಡುವುದರಿಂದ ಏಕಾಗ್ರತೆ ಮತ್ತು ನೆನಪಿನ ಶಕ್ತಿ ವೃದ್ಧಿಗೆ ಸಹಕಾರಿಯಾಗಿದೆ.
ಜೊತೆಗೆ ಪ್ರಾಣಾಯಾಮ ಮತ್ತು ಧ್ಯಾನ ಮಾಡುವುದರಿಂದ ಮನಸ್ಸು ಶಾಂತವಾಗುತ್ತದೆ, ಎಂದು ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಹೇಳಿದರು.
ಅವರು ಸೆಪ್ಟೆಂಬರ್ 3 ಗುರುವಾರ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ನರಿಕೊಂಬು ಇಲ್ಲಿ ನಡೆದ ತಾಲೂಕು ಮಟ್ಟದ 14 ಹಾಗೂ 17 ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಯೋಗಾಸನ ಸ್ಪರ್ಧೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್ ವಹಿಸಿದ್ದರು.
ನಿವೃತ್ತ ಶಿಕ್ಷಕಿ ದೇವಕಿ ದೇಜಪ್ಪ ಕೋಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಕಾರ್ಯಕ್ರಮದ ವೇದಿಕೆಯಲ್ಲಿ ಶಿಕ್ಷಣ ಸಂಯೋಜಕ ಸುಧಾ,, ಪ್ರಭಾರ ಸಮನ್ವಯಾಧಿಕಾರಿ ವಿದ್ಯಾ, ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘ ಗ್ರೇಡ್ ಒಂದರ ಅಧ್ಯಕ್ಷ ಶಿವಪ್ರಸಾದ್ ರೈ, ಗ್ರೇಡ್ 2 ರ ಅಧ್ಯಕ್ಷ ಇಂದು ಶೇಖರ್ , ಸಮೂಹ ಸಂಪನ್ಮೂಲ ವ್ಯಕ್ತಿ ಪುಷ್ಪ,ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಲಕ್ಷ್ಮಿ ಪ್ರಕಾಶ್,, ಕ್ರೀಡಾಕೂಟಗಳ ಕಲ್ಲಡ್ಕ ವಲಯ ನೋಡಲ್ ಜಗದೀಶ್, ನಿವೃತ್ತ ಸಿ ಆರ್ ಪಿ ಸತೀಶ್ ರಾವ್,ನರಿಕೊಂಬು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ, ಶಾಲಾ ನಾಯಕ ಹಿತೇಶ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಕೆ ಸ್ವಾಗತಿಸಿ, ಶಿಕ್ಷಕಿ ದಿವ್ಯಶ್ರೀ ವಂದಿಸಿದರು. ಶಿಕ್ಷಕಿ ವಿಲ್ಮಾ ಪ್ರಸಿಲ್ಲ ಪಿಂಟೋ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು.




