ಉಪ್ಪಿನಂಗಡಿ: ಪೆರ್ನೆ ಸಮೀಪದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಪ್ರದೇಶದಲ್ಲಿ ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ಮೃತರನ್ನು ಕಾವ್ಯ ಎಂದು ಗುರುತಿಸಲಾಗಿದೆ.
ಅನುಮಾನಾಸ್ಪದ ಸ್ಥಿತಿ: ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದರೂ, ಅರ್ಧ ಕಾಲು ನೆಲಕ್ಕೆ ತಗಲುವಂತಿದ್ದುದರಿಂದ ಸಾವಿನ ಸುತ್ತ ಹಲವು ಸಂಶಯಗಳು ಮೂಡಿವೆ.
ಸಾವು ಕೊಲೆಯೋ? ಆತ್ಮಹತ್ಯೆಯೋ?: ಮೇಲ್ನೋಟಕ್ಕೆ ಇದು ಆತ್ಮಹತ್ಯೆಯೋ ಅಥವಾ ಕೊಲೆ ನಡೆಸಿ ನೇಣು ಹಾಕಲಾಗಿದೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕುಟುಂಬ ಹಿನ್ನೆಲೆ: ಮೃತ ಕಾವ್ಯ ಅವರಿಗೆ ಇಬ್ಬರು ಮಕ್ಕಳಿದ್ದು, ಇತ್ತೀಚೆಗಷ್ಟೇ ಹೆಣ್ಣು ಮಗಳ ವಿವಾಹ ನೆರವೇರಿಸಿದ್ದರು. ಪ್ರಸ್ತುತ ಗಂಡು ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಸಾವಿನ ನಿಖರ ಕಾರಣ ಬೆಳಕಿಗೆ ಬರಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ.







